ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗವೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಭಾರಿ ಆತಂಕ ಮೂಡಿಸಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಕಾಡಾನೆ ಗ್ರಾಮದ ಮಧ್ಯಭಾಗದಲ್ಲೇ ಹಾದುಹೋಗಿದ್ದು, ಹಾಲಿನ ಡೇರಿಯ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಆನೆಗಳ ಹಾವಳಿಗೆ ಶಾಶ್ವತ ಕಡಿವಾಣ ಹಾಕುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.