ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಅವರ ಆಪ್ತರಿಗೆ, ಅಭಿಮಾನಿಗಳಿಗೆ, ಕುಟುಂಬದವರಿಗೆ ಸಂತಸ ತಂದಿದೆ. ನಟ ರಮೇಶ್ ಅರವಿಂದ್ ಅವರು ವಿಡಿಯೋ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ.