ರಾಜ್ಯಸಭಾ ಟಿಕೆಟ್ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ನಿರಾಸೆಯಾಗಿದೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದೆ. ರಾಜ್ಯಸಭೆಗೆ ಹೊಸ ಮುಖಕ್ಕೆ ಮಣೆ ಹಾಕೋ ಮೂಲಕ ಜೆಡಿಎಸ್ ನಾಯಕರ ಲೆಕ್ಕಾಚಾರಕ್ಕೆ ಬಿಜೆಪಿ ಹೊಸ ತಿರುವು ನೀಡಿದೆ. ವಯಸ್ಸು, ಆರೋಗ್ಯದ ಕಾರಣದಿಂದ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿಗೆ ಯಾವ ಒತ್ತಡ ಹಾಕಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.