ವಾಹನ ದಟ್ಟಣೆಯಿಂದ ಕೂಡಿರುವ ಬೆಂಗಳೂರು- ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಚಾಲಕನೋರ್ವ ಹುಚ್ಚಾಟ ಮೆರೆದಿದ್ದಾನೆ. ನಡುರಸ್ತೆಯಲ್ಲಿ ಮನಬಂದಂತೆ ಕಾರು ಚಾಲನೆ ಮಾಡಿದ ಪರಿಣಾಮ ಅಕ್ಕಪಕ್ಕದಲ್ಲಿ ತೆರಳುತ್ತಿದ್ದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ ಪ್ರಸಂಗ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಇದು ರಸ್ತೆಯೇ ಹೊರತು ರೇಸ್ ಟ್ರ್ಯಾಕ್ ಅಲ್ಲ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.