ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ಬಾಬಿಗೆ ನುಗ್ಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಕುಂದಾಪುರದಿಂದ ಅಕ್ಕಿ ತುಂಬಿಕೊಂಡು ಶಿಗ್ಗಾವಿ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಚಾಲಕ ಸಿದ್ದರಾಜು ಅಪಾಯದಿಂದ ಪಾರಾಗಿದ್ದಾರೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.