ರಾಜ್ಯದಲ್ಲಿರುವ ಆನೆ ಬಿಡಾರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಸೂಕ್ತವಾದ ಮತ್ತು ಕಠಿಣವಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅಥವಾ ಎಸ್ಒಪಿ (Standard Operating Procedure) ಜಾರಿಯಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ಬಂದ್ ಮಾಡಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.