ನನಗೆ ಟಿಕೆಟ್ ನೀಡಿದ್ದಕ್ಕೆ ತುಂಬಾ ಸಂತಸವಾಗುತ್ತಿದೆ ಎಂದು ದಾವಣಗೆರೆಯಲ್ಲಿ ಟಿವಿ9ಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶ್ರಮಿಸುತ್ತೇನೆ. ವಿಶೇಷವಾಗಿ ಹೆಚ್ಚು ಉದ್ಯೋಗ ಸೃಷ್ಟಿಸಲು ಪ್ರಯತ್ನ ಮಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉಪಚುನಾವಣೆ ಎದುರಿಸುವೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.