ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಕಿಂಗ್ ಖಾಲೀದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮತ್ತೊಮ್ಮೆ ದಾಳಿ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ದಾಳಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಖಾಲಿ ಮಾಡಿಸಲಾಗಿದ್ದು, ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದಾಗ್ಯೂ, ಈ ದಾಳಿಯ ಕುರಿತು ಹೌತಿ ಬಂಡುಕೋರರಿಂದ ಯಾವುದೇ ತಕ್ಷಣದ ಅಧಿಕೃತ ಹೇಳಿಕೆ ಹೊರಬಂದಿಲ್ಲ.