ಕರ್ನಾಟಕ ಸರ್ಕಾರದ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸೇರಿದ ಮುಳ್ಳಯ್ಯನಗಿರಿ ಸಮೀಪದ ಏಳುನೂರುಖಾನ್ ಕಾಫಿ ಎಸ್ಟೇಟ್ನಲ್ಲಿ ಅನುಮಾನಾಸ್ಪದವಾಗಿ ಬಂದೂಕುಧಾರಿಗಳು ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿದ್ದು, ತೀವ್ರ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ. ಈ ಬಂದೂಕುಧಾರಿಗಳು ಯಾರು ಮತ್ತು ಯಾವ ಉದ್ದೇಶಕ್ಕಾಗಿ ಎಸ್ಟೇಟ್ ಆವರಣದಲ್ಲಿ ಓಡಾಡುತ್ತಿದ್ದಾರೆ ಎಂಬ ಬಗ್ಗೆ ಸ್ಥಳೀಯವಾಗಿ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.