ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿ ವಿಧಾನ ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ನೆರೆವೇರಿದೆ. ಕ್ರಿಯಾಸಮಾಧಿ ಬಳಿಕ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಗಿದ್ದು, ಮಣ್ಣು ಹಾಕದೆ ಕ್ರಿಯಾ ಸಮಾಧಿಯಲ್ಲಿ ವಿಭೂತಿ, ಬಿಲ್ವಪತ್ರೆ, ಗಂಗಾಜಲ ಹಾಕುವುದರ ಜೊತೆಗೆ ಕಳಸವಿಟ್ಟು ವಿಧಿವಿಧಾನ ನೆರವೇರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ S.S.ಮಲ್ಲಿಕಾರ್ಜುನ್ ಈ ಎಲ್ಲ ಕಾರ್ಯಗಳನ್ನು ನೆರವೇರಿಸಿದ್ದಾರೆ.