ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರಡಿಯೊಂದು ನುಗ್ಗಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಸಿತ್ತು. ಏರ್ಪೋರ್ಟ್ ಆವರಣದಲ್ಲಿ ಕರಡಿ ಕಂಡು ಸ್ಥಳೀಯರು ಮತ್ತು ಸಿಬ್ಬಂದಿ ಭಯಭೀತರಾಗಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿ ಕರಡಿಯನ್ನು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು. ಇದರಿಂದ ಶಿವಮೊಗ್ಗ ಏರ್ಪೋರ್ಟ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿದೆ.