ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಾಲಯದ ನ್ಯಾಯಾಧೀಶರ ಇ-ಮೇಲ್ಗೆ ಈ ಕುರಿತು ಬೆದರಿಕೆ ಸಂದೇಶ ಬಂದಿದ್ದು, ಕೋರ್ಟ್ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ತೀವ್ರ ಪರಿಶೀಲನೆ ನಡೆಸಿದ್ದಾರೆ. ಭದ್ರತೆಯನ್ನು ಹೆಚ್ಚಿಸಲಾಗಿದೆ.