ಶಿವಮೊಗ್ಗದ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ ಗ್ರಾಮದಲ್ಲಿ ಮೂವರ ಮೇಲೆ ಚಿರತೆ ದಾಳಿ ನಡೆದಿದೆ. ರೈತ ಮೃತ್ಯುಂಜಯ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ರಸ್ತೆ ಮೇಲೆ ಓಡಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.