ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾ ನಗರದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದ ಮಧ್ಯರಾತ್ರಿ 2.30ರ ಸುಮಾರಿಗೆ ಗುಡ್ಡ ಕುಸಿದು ಮಲ್ಲಿಕಾರ್ಜುನ (35), ನಾಗವೇಣಿ (28) ಮತ್ತು ಸಂತೋಷ್ (3) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಚೌಕರೆಗಾರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.