ಮುಖ್ಯಮಂತ್ರಿ ಸ್ಥಾನದ ಚರ್ಚೆ ಮತ್ತು ಉಪಚುನಾವಣೆ ಫಲಿತಾಂಶದ ಕುರಿತು ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿಎಂ ಸ್ಥಾನಕ್ಕೆ ಫಲಿತಾಂಶದ ಸಂಬಂಧವಿಲ್ಲ ಎಂದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಬಗ್ಗೆ ಪ್ರತಿಕ್ರಿಯಿಸಿ, ಡ್ರಗ್ಸ್ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶ ಎಂದಿದ್ದಾರೆ. ಮುಂಬೈ ಲಿಂಕ್ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.