ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇವಿನಮಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಪಕ್ಷದ ಮುಖಂಡರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಭವ್ಯ ಸನ್ಮಾನ ನಡೆಯಿತು. ಏಪ್ರಿಲ್ 9 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಲಾಯಿತು.