ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಭೇಟಿ ನೀಡಿ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಉದ್ಘಾಟಿಸಿದರು. ಸಚಿವರಾದ ಮಹದೇವಪ್ಪ, ಮಧು ಬಂಗಾರಪ್ಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ವಿ. ಸುನಿಲ್ ಕುಮರ್ ಹೆಗಲ ಮೇಲೆ ಸಿಎಂ ಕೈ ಹಾಕಿರೋದು ನೆರದವರ ಗಮನ ಸೆಳೆದಿದೆ.