ಪುರಿಯ ಜಗನ್ನಾಥ ದೇವಾಲಯದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ, ಶ್ರೀಕಾಕುಳಂನ ಪಲಾಸ ಬಳಿ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಮಳೆಗೆ ಸಿಲುಕಿ ಇನ್ನೋವಾ ಕಾರು ಸ್ಕಿಡ್ ಆಗಿದೆ. ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.