ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ದಾವಣಗೆರೆಯ ಕುಂದವಾಡ ಬಳಿಯ ಸಂಚಾರಿ ಕುರಿಗಾಹಿಗಳ ಬಿಡಾರಗಳಿಗೆ ಭೇಟಿ ನೀಡಿದರು. ಈ ವೇಳೆ ಅವರು ಕುರಿಗಾಹಿಗಳೊಂದಿಗೆ ಸಂವಾದ ನಡೆಸಿ, ಅವರ ಸಂಸ್ಕೃತಿಯ ಪ್ರತೀಕವಾದ ಕಂಬಳಿ ಕುರಿತು ಹಾಡು ಹಾಡಿ ರಂಜಿಸಿದರು. ಕುರಿಗಾಹಿಗಳ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಕ್ಕಳ ಶಿಕ್ಷಣದ ಕುರಿತು ಜಾಗೃತಿ ಮೂಡಿಸಿದರು.