ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ವ್ಯಕ್ತಿಯೊಬ್ಬ ದೇವರಂತೆ ಬಂದು ಕಾಪಾಡಿರುವ ವಿಡಿಯೋ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ನದಿ ತೀರದಲ್ಲಿ ಕುಕ್ಕೀಸ್ಗಳನ್ನು ಮಾರಾಟ ಮಾಡುತ್ತಿದ್ದರು. ಆ ವೇಳೆ ಬಾಲಕ ನೀರಿಗೆ ಬಿದ್ದಿದ್ದನ್ನು ನೋಡಿ ಸ್ಥಳಕ್ಕೆ ಓಡಿಬಂದಿದ್ದಾರೆ. ಬಳಿಕ ಇನ್ನೊಬ್ಬರ ಸಹಾಯ ಪಡೆದು ಬಾಲಕನನ್ನು ಯಶಸ್ವಿಯಾಗಿ ಮೇಲಕ್ಕೆತ್ತಿದ್ದಾರೆ.