ಕಲಬುರಗಿಯ ಡಾ. ಮಾಲಕರಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಪರೀಕ್ಷೆ ವೇಳೆ ಮೊಬೈಲ್ ಬಳಸಿ ನಕಲು ಮಾಡುತ್ತಿದ್ದ ವಿದ್ಯಾರ್ಥಿ ಶಹಬಾಜ್ನನ್ನು ಪ್ರಶ್ನಿಸಿದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಅವರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಕಲು ತಡೆದಿದ್ದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವುದು ಗಂಭೀರ ವಿಷಯವಾಗಿದೆ.