ಆ್ಯಕ್ಸಲ್ ತುಂಡಾದ ಪರಿಣಾಣ ಸಾರಿಗೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಬಳಿ ನಡೆದಿದೆ. ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದ್ದು, ಮೃತನನ್ನು ದರ್ಶನ್(20) ಎಂದು ಗುರುತಿಸಲಾಗಿದೆ. 50 ಮಂದಿಗೆ ಗಾಯಗಳಾಗಿದ್ದು, ಆ ಪೈಕಿ 20ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.