ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ದಿಢೀರ್ ಆಗಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ನ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಆಗುತ್ತಿರುವ ವಿಚಾರವಾಗಿ ಚರ್ಚಿಸಲು ಅವರು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.