ಸುಳ್ಯ ತಾಲೂಕಿನ ಕರಿಕ್ಕಳ್ - ಸಿಂತಿಕಲ್ ಮಾರ್ಗ ಮಧ್ಯೆ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತಕ್ಕೀಡಾಗಿದೆ. ಕ್ಷೇತ್ರದಲ್ಲಿ ಸಂಚರಿಸುತ್ತಿದ್ದ ವೇಳೆ ಎದುರು ತೆರಳುತ್ತಿದ್ದ ಕಾರು ಸಡನ್ ಬ್ರೇಕ್ ಹಾಕಿದ ಕಾರಣ ಶಾಸಕರ ಇನ್ನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಅವರ ಕಾರು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.