ಕರ್ನಾಟಕದಲ್ಲಿ ಓಲಾ, ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ತೀರ್ಪಿನಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ ಕಾನೂನು ತಡೆಯ ನಿವಾರಣೆಯಾಗಿ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ.