ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು. ಪಂದ್ಯ ಮುಗಿಸಿ ಡಗೌಟ್ಗೆ ಮರಳುವ ವೇಳೆ ಸೂರ್ಯ, ತಂಡದಲ್ಲಿರುವ ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ಅವರ ಕಾಲನ್ನು ಮುಟ್ಟಿ ನಮಸ್ಕರಿಸಿದರು.