ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೇವಿಯ ದರ್ಶನ ಪಡೆಯಲಿದ್ದು, ಈ ಅವಧಿಯಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಝಡ್-ಪ್ಲಸ್ ಭದ್ರತೆ ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ನಿಂದಾಗಿ 3 ರಿಂದ 3:30ರ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ.