ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು. ವಸಂತನಗರದ ಬಿ-ಸ್ಟೈಲ್ ಕಚೇರಿಯಲ್ಲಿ ಸುಮಾರು ಒಂದು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು. ನಗರದ ಮೂಲಸೌಕರ್ಯ, ಸಂಚಾರ ನಿರ್ವಹಣೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಇಬ್ಬರು ನಾಯಕರು ಮಹತ್ವದ ಮಾತುಕತೆ ನಡೆಸಿದರು.