ಮಧುರೈನ ತಿರುಪ್ಪರಂಕುಂಡ್ರಮ್ ಬೆಟ್ಟದ ಮೇಲಿರುವ ‘ದೀಪತೂನ್’ ಕಲ್ಲಿನ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗುವ ಕುರಿತ ತನ್ನ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರ ಮತ್ತು ದೇವಸ್ಥಾನದ ಆಡಳಿತ ಮಂಡಳಿಯನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು, ಸರ್ಕಾರ ಮತ್ತು ಅಧಿಕಾರಿಗಳ ನಡೆ “ಉದ್ದೇಶಪೂರ್ವಕ ನ್ಯಾಯಾಂಗ ನಿಂದನೆ” ಎಂದು ಕಿಡಿಕಾರಿದ್ದು, ಅರುಳ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಟ್ರಸ್ಟಿಗಳ ಮಂಡಳಿಯನ್ನು ತಕ್ಷಣದಿಂದ ಅಮಾನತುಗೊಳಿಸಿದೆ.