ವರ್ಷಾಂತ್ಯ ಹಿನ್ನಲೆ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದೆ. ವರ್ಷಪೂರ್ತಿ ಮಂಜಿನಿಂದ ಆವರಿಕೊಂಡಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸವಿಯಲು ಪ್ರವಾಸಿಗರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತಿರೋ ದೃಶ್ಯಗಳು ಕಂಡುಬಂತು. ಹೊರ ಜಿಲ್ಲೆಗಳಿಂದ ಮಾತ್ರವಲ್ಲದೆ ಅಂತಾರಾಜ್ಯದಿಂದಲೂ ನೂರಾರು ಮಂದಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದರು.