ಜಿಂದಾಲ್ನ ವಿದ್ಯಾನಗರದಲ್ಲಿ ಕಾಣಿಸಿಕೊಂಡಿದ್ದ ಮೂರು ಕರಡಿಗಳಿಂದ ಆತಂಕ ಸೃಷ್ಟಿಯಾಗಿತ್ತು. ಅರಣ್ಯ ಇಲಾಖೆಯ ವಿಶೇಷ ಕಾರ್ಯಾಚರಣೆಯಿಂದ ಈ ಕರಡಿಗಳನ್ನು ಯಶಸ್ವಿಯಾಗಿ ಸೆರೆಹಿಡಿಯಲಾಯಿತು. ಕಾರ್ಮಿಕರು ಹಾಗೂ ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಸೆರೆಹಿಡಿದ ಕರಡಿಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕರಡಿ ಧಾಮಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಇದು ಮಾನವ-ಪ್ರಾಣಿ ಸಂಘರ್ಷವನ್ನು ತಗ್ಗಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ.