ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಜಮೀನಿನಲ್ಲಿ ಹುಲಿ ಓಡಾಟ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಬೆಳ್ಳಂ ಬೆಳಗ್ಗೆ ಜಮೀನಿನಲ್ಲಿ ಹುಲಿ ಬಿಂದಾಸ್ ಆಗಿ ಓಡಾಡಿದ್ದು, ಈ ದೃಶ್ಯವನ್ನ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಗ್ಗೆ ಸ್ಥಳೀಯರು ಭೀತಿ ವ್ಯಕ್ತಪಡಿಸಿದ್ದಾರೆ.