ಮೈಸೂರು ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಪ್ರತ್ಯಕ್ಷವಾಗಿದೆ. ಇಂದು ಮಂಡಕಹಳ್ಳಿ ಏರ್ಪೋರ್ಟ್ಗೆ ಸಿಎಂ ಸಿದ್ದರಾಮಯ್ಯ ಕೂಡ ಆಗಮಿಸುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಬಿಇಎಂಎಲ್ ಬಳಿ ಹುಲಿ ಕಾಣಿಸಿಕೊಂಡಿತ್ತು. ಹುಲಿಯ ವಿಡಿಯೋ ಈಗ ವೈರಲ್ ಆಗಿದೆ.