ಮಡಿಕೇರಿ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಗೋಚರವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ. ತೋಟಗಳಲ್ಲಿ ಹುಲಿಯ ಹೆಜ್ಜೆಗುರುತುಗಳು ಪತ್ತೆಯಾಗಿದ್ದು, ಅದು ಅಲ್ಲಿಯೇ ಆಶ್ರಯ ಪಡೆದಿರುವ ಸಾಧ್ಯತೆ ಇದೆ. ಕಾರ್ಮಿಕರು ಮತ್ತು ಮಕ್ಕಳ ಸುರಕ್ಷತೆಗಾಗಿ ಎಚ್ಚರಿಕೆ ನೀಡಲಾಗಿದೆ. 20ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯದಲ್ಲಿದ್ದಾರೆ.