ತಮಿಳುನಾಡಿನ ತಿರುಚಿಯಲ್ಲಿ ಸರ್ಕಾರಿ ಬಸ್ ಚಾಲಕನೊಬ್ಬ ಚಿಲ್ಲರೆ ಹಣದ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆ ಸಾರ್ವಜನಿಕ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ತಿರುಚಿರಾಪಳ್ಳಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. TNSTC ಚಾಲಕನ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ, ಪ್ರಯಾಣಿಕರ ರಕ್ಷಣೆ ಬಗ್ಗೆ ಪ್ರಶ್ನೆಗಳು ಎದ್ದಿವೆ.