ತಿರುಪತಿ ತಿರುಮಲ ದೇವಸ್ಥಾನ ತುಪ್ಪ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಅನಂತಪುರಂ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಬಿದ್ದ ತುಪ್ಪಕ್ಕಾಗಿ ಸ್ಥಳೀಯರು ಮುಗಿಬಿದ್ದಿದ್ದಾರೆ.