ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದಿದೆ. ನಿನ್ನೆ (ಜೂನ್ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.