ಬಿರುಗಾಳಿ ಹೊಡೆತಕ್ಕೆ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಬಳಿ ನಡೆದಿದೆ. ಪರಿಣಾಮ ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದ್ದು, ಪರಿಣಾಮ ಕಿಲೋ ಮೀಟರ್ ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಅಂತಿಮವಾಗಿ ಮರವನ್ನು ವಾಹನ ಸವಾರರು ಮತ್ತು ಸ್ಥಳೀಯರು ಜೊತೆಯಾಗಿ ತೆರವು ಮಾಡಿದ್ದಾರೆ.