ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿದೆ. ಹೊಸಕೋಟೆಯಿಂದ ದಾಬಸ್ಪೇಟೆಗೆ ಕೋಳಿ ಫೀಡ್ ಸಾಗಿಸ್ತಿದ್ದ ಲಾರಿ ಅತಿ ವೇಗವಾಗಿ ಬಂದು ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಲಾರಿ ಚಾಲಕ ನಾರಾಯಣಸ್ವಾಮಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.