ತಮಿಳುನಾಡಿನಲ್ಲಿ ದಳಪತಿ ವಿಜಯ್ ಟಿವಿಕೆ ಪಕ್ಷ ಭರ್ಜರಿ ಜಯಗಳಿಸಿದ್ದು, ಈಗಾಗಲೇ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ತುಮಕೂರು ಮೂಲದ ಸುನೀಲ್ ಆನಂದ್ ಎನ್ನುವರು ಟಿವಿಕೆ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಬ್ಬೆಗಟ್ಟ ಹೋಬಳಿಯ ವಡಕೆಘಟ್ಟ ಗ್ರಾಮದ ಸುನೀಲ್ ಆನಂದ್, ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.