ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಯಕ್ಕಲಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ ನಡೆದಿದೆ. ಮುಸುಕುಧಾರಿ ಕಳ್ಳರು ದೇವಾಲಯದ ಬಾಗಿಲು ಮುರಿದು ಹುಂಡಿಯನ್ನು ಹೊತ್ತೊಯ್ದಿದ್ದು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ತುಮಕೂರಿನಲ್ಲಿ ದೇವಸ್ಥಾನ ಹುಂಡಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ.