ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲಿನಾಥಪುರ ಹೊಸಲೂರು ಮಾರಮ್ಮ ದೇವಸ್ಥಾನದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಂಡ್ಯದ ಕೃಷ್ಣೇಗೌಡ (48) ಮತ್ತು ಮೈಸೂರಿನ ಮಂಜುನಾಥ್ (47) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.