ಸೈನ್ ಬೋರ್ಡ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ನಡೆದಿದೆ. ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ್, ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಣೆ ನಡೆಸುವ ಜೊತೆಗೆ ಅಪಘಾತಕ್ಕೆ ಕಾರಣ ಏನೆಂದು ಪ್ರಯಾಣಿಕರಿಂದ ಮಾಹಿತಿ ಸಂಗ್ರಹಮಾಡಿದ್ದಾರೆ.