ಯಾದಗಿರಿ ತಾಲೂಕಿನ ಕಡೇಚೂರ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗುತ್ತಿದ್ದಾಗ, ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಗಾಡೇಗರ ಗ್ರಾಮದ ಶಿವರಾಜ್ (60) ಮತ್ತು ಬಸವಲಿಂಗ (28) ಮೃತ ದುರ್ದೈವಿಗಳು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.