ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ನ ಗೂಂಡಾ ಸಂಸ್ಕೃತಿ ಮತ್ತು ದೇಶ ವಿರೋಧಿ ನೀತಿ ಹಾಗೂ ಕಾಕ್ರೋಚ್ ಪಾರ್ಟಿ (CJP) ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ನಗರದ ಸಾವಿರಾಳ ಧೂಮಾವತಿ ಕಟ್ಟೆ ಆವರಣದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಐವರು ಬಿಜೆಪಿ ಶಾಸಕರು ಸೇರಿದಂತೆ ಜಿಲ್ಲೆಯ ನೂರಾರು ಕಾರ್ಯಕರ್ತರು ಪಾಲ್ಗೊಂಡು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಸುಭದ್ರತೆಗೆ ಧಕ್ಕೆ ತರುವ ರಾಜಕೀಯ ಪಕ್ಷಗಳ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತು.