ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ತಂಗ್ಖುಲ್ ನಾಗಾ ಸಮುದಾಯದ ಸದಸ್ಯರ ಮೇಲೆ ಹಲ್ಲೆ ನಡೆದ ನಂತರ ಹೊಸ ಹಿಂಸಾಚಾರ ಭುಗಿಲೆದ್ದಿದೆ. ಹಲವಾರು ಪಾಳುಬಿದ್ದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ 5 ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಕರ್ಫ್ಯೂ ವಿಧಿಸುವ ಮೂಲಕ ಪ್ರತಿಕ್ರಿಯಿಸಿದೆ.