ಮಂಡ್ಯ ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಸಚಿವರು ಪಾಲ್ಗೊಂಡರು. ಯೋಗ ದಿನದ ಅಂಗವಾಗಿ ಮಂಡ್ಯದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದು ಆರೋಗ್ಯ ಮತ್ತು ಯೋಗದ ಮಹತ್ವ ಸಾರಿತು.