ಇರಾನ್ನ ಚಬಹಾರ್ ಬಂದರಿನ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಶಾಹಿದ್ ಕಲಂತರಿ ಬಂದರಿನಲ್ಲಿದ್ದ ವೀಕ್ಷಣಾ ಗೋಪುರ ಜಖಂಗೊಂಡಿದೆ. ಚಬಹಾರ್ ಗೋಪುರಕ್ಕೆ ಉಂಟಾಗಿರುವ ಹಾನಿಯನ್ನು ತೋರಿಸುವ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಂತರ ಇವುಗಳನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಹಂಚಿಕೊಂಡಿದ್ದಾರೆ. ರಾತ್ರೋರಾತ್ರಿ ನಡೆದ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.