ಇರಾನ್ ಸೇನೆ ಡ್ರೋನ್ ಹಾಗೂ ಮಿಸೈಲ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಯು ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ದುಬೈಗೆ ತೆರಳಿದ್ದ ಕನ್ನಡಿಗರು ವಾಪಸ್ ಬರಲು ಸಾಧ್ಯವಾಗದೆ ಅಲ್ಲೇ ಉಳಿದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇವರ ನೆರವಿಗೆ ದುಬೈ ಕನ್ನಡಿಗರು ನಿಂತಿದ್ದಾರೆ.