ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಹೊರಭಾಗ ಹಾನಿಗೊಳಗಾಗಿ ಮುಳುಗುತ್ತಿದ್ದ ‘ಶ್ರೀ ನವರತ್ನ’ ಹೆಸರಿನ ಮೀನುಗಾರಿಕಾ ಬೋಟ್ನಲ್ಲಿದ್ದ ಏಳು ಜನ ಮೀನುಗಾರರನ್ನು ಪವಾಡಸದೃಶವಾಗಿ ರಕ್ಷಿಸಲಾಗಿದೆ. ಅಂಕೋಲಾದಿಂದ ಹೊರಟಿದ್ದ ಈ ಬೋಟ್ ಮುಳುಗಡೆಯಾಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮೀನುಗಾರ ಇಕ್ಬಾಲ್ ಅಬ್ದುಲ್ ಗಫೂರ್ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಿದ್ದು, ಹೊನ್ನಾವರ ಸಿಎಸ್ಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.